ಮಾವು ನಿಷೇಧ ಹಿಂಪಡೆಯುವಂತೆ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಕರ್ನಾಟಕದ ತೋತಾಪುರಿ ಮಾವು ಖರೀದಿ ಮೇಲೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪತ್ರ ಸಹಿತ ಪೋಸ್ಟ್‌ ಮಾಡಿ ಕರ್ನಾಟಕದಿಂದ ಚಿತ್ತೂರು ಜಿಲ್ಲೆಗೆ ತೋತಾಪುರಿ ಮಾವಿನ ಹಣ್ಣುಗಳ ಪ್ರವೇಶದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿವೆ ಪತ್ರ ಬರೆದಿದ್ದಾರೆ. ಈ ನಿಷೇಧವು ಸಾವಿರಾರು ರೈತರು ಮತ್ತು ವ್ಯಾಪಾರಿಗಳಿಗೆ ನೋವುಂಟು ಮಾಡುತ್ತದೆ. ನಮ್ಮ ಜನರ ಸಮೃದ್ಧಿಗೆ ರಾಜ್ಯಗಳ ನಡುವಿನ ಸಹಕಾರ ಅತ್ಯಗತ್ಯ ಎಂದಿದ್ದಾರೆ.