Home ಸುದ್ದಿ ದೇಶ ಮಿಥುನ್ ಚಕ್ರವರ್ತಿಗೆ ಎದೆನೋವು: ಆಸ್ಪತ್ರೆಗೆ ದಾಖಲು

ಮಿಥುನ್ ಚಕ್ರವರ್ತಿಗೆ ಎದೆನೋವು: ಆಸ್ಪತ್ರೆಗೆ ದಾಖಲು

0

ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
73 ವರ್ಷದ ಮಿಥುನ್ ಚಕ್ರವರ್ತಿ ಅವರು ಚಲನಚಿತ್ರಗಳು ಮತ್ತು ಟಿವಿ ಶೋಗಳಲ್ಲಿ ನಿರಂತರವಾಗಿ ಸಕ್ರಿಯರಾಗಿದ್ದಾರೆ. ಅವರು ತಮ್ಮ ನಟನಾ ಕೌಶಲ್ಯಕ್ಕಿಂತ ತಮ್ಮ ನೃತ್ಯದಿಂದ ಹೆಚ್ಚು ಪ್ರಸಿದ್ಧರಾಗಿದ್ದಾರೆ. ನಟನ ಆರೋಗ್ಯ ಹದಗೆಟ್ಟಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅವರ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಮಿಥುನ್ ದಾದಾ ಶೀಘ್ರ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು.

Exit mobile version