ಮಿನಿ ತಾರಾಲಯದ ಕನಸು ಸಾಕಾರವಾಗಿಸುವತ್ತ ಮಹತ್ತರ ಹೆಜ್ಜೆ!

ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಸ್ಥಾಪನೆ

ವಿಜಯಪುರ: ಬಬಲೇಶ್ವರ ಮತ ಕ್ಷೇತ್ರದ ಮಮದಾಪುರದಲ್ಲಿ ವಸತಿ ಶಾಲೆ ನಿರ್ಮಾಣಕ್ಕಾಗಿ ರೂ. 56.88 ಕೋಟಿ ಕಾಮಗಾರಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ದೊರತಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ 2015-16ನೇ ಸಾಲಿನ ಆಯ-ವ್ಯಯದಲ್ಲಿ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಕಾರಣಾಂತರಗಳಿಂದ ಇದು ಅನುಷ್ಠಾನಕ್ಕೆ ಬರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದು ಇದೀಗ ಕಾರ್ಯರೂಪಕ್ಕೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿರುವುದು ಸಂತಸ ತರಿಸಿದೆ.

ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಸ್ಥಾಪನೆ: ಈ ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ, ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆಗಳೂ ಇರಲಿದೆ.

2 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ : #ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಮದಾಪುರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ತಲಾ 22 ಕೋಟಿ ರೂ.ಗಳಂತೆ ಒಟ್ಟು 44 ಕೋಟಿ ರೂ. ಒದಗಿಸಲು ಕೂಡ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ. ಅಭಿವೃದ್ಧಿಯ ಪರ್ವ ಮುಂದುವರೆಯಲಿದೆ… ಎಂದಿದ್ದಾರೆ