ಮೊದಲು ತಮ್ಮ ಅಭಿಪ್ರಾಯ ಹೇಳುತ್ತಾರೆ ನಂತರ ಅದೆಲ್ಲ ಹೈಕಮಾಂಡ್ಗೆ ಬಿಟ್ಟ ವಿಚಾರ ಎನ್ನುತ್ತಾರೆ.
ಬೆಳಗಾವಿ: ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಮತ್ತು ಮುಂದಿನ ಅವಧಿಗೂ ಅವರೇ ಮುಂದುವರಿಯುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು ಸಿ.ಎಂ ವಿಚಾರದಲ್ಲಿ ನಾನು ಭವಿಷ್ಯ ನುಡಿಯುವಂಥದ್ದಲ್ಲ, ಸಿ ಎಂ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಮತ್ತು ಬದಲಿಸಬೇಕು ಎಂಬುದನ್ನು ಸಿಎಲ್‌ಪಿ ಹಾಗೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸ್ಪಷ್ಟನೆ ನೀಡಿದರು. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೆಲ ಮಂತ್ರಿ ಮತ್ತು ಶಾಸಕರು ಒಂದು ವಾಡಿಕೆಯನ್ನು ರೂಢಿಸಿಕೊಂಡಿದ್ದಾರೆ ಮಾರಾಯ್ರೇ. ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ತಮ್ಮ ಅಭಿಪ್ರಾಯ ಹೇಳುತ್ತಾರೆ ನಂತರ ಅದೆಲ್ಲ ಹೈಕಮಾಂಡ್ಗೆ ಬಿಟ್ಟ ವಿಚಾರ, ಅದು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎನ್ನುತ್ತಾರೆ! ಸಿಮ್ ಬದಲಾವಣೆ ವಿಚಾರದಲ್ಲಿ ಮಾಧ್ಯಮದವರು ನೀವೇ ಪದೇಪದೆ ಪ್ರಶ್ನೆ ಕೇಳುತ್ತೀರಿ. ಹೀಗಾಗಿ ಅದು ಚರ್ಚೆಯಾಗುತ್ತಿದೆ ಎಂದರು.