ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಆಯ್ಕೆ

0
11

ರಾಂಚಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅವರನ್ನು ಆಯ್ಕೆ ಮಾಡಲಾಗಿದೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಂಧನದ ಬೆನ್ನಲ್ಲೇ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ನಾಯಕ ಚಂಪೈ ಸೊರೆನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ.
ಇನ್ನು ಈ ಕುರಿತಂತೆ ಜಾರ್ಖಂಡ್ ಸಚಿವ ಬನ್ನಾ ಗುಪ್ತಾ ಮಾತನಾಡಿದ್ದು, ಶಾಸಕಾಂಗ ಪಕ್ಷದ ನಾಯಕರನ್ನಾಗಿ ಚಂಪೈ ಸೊರೆನ್ ಅವರನ್ನು ಆಯ್ಕೆ ಮಾಡಿದ್ದೇವೆ. ಪ್ರಮಾಣ ವಚನ ಸಮಾರಂಭಕ್ಕೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಾವು ರಾಜಭವನಕ್ಕೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Previous articleಸಿಎಂ ಅರೆಸ್ಟ್‌
Next articleಎಸಿಸಿ ಅಧ್ಯಕ್ಷರಾಗಿ ಮುಂದುವರಿದ ಜೈ ಶಾ