ಬೆಂಗಳೂರು: ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಹಿಟ್ಲರ್, ಸರ್ವಾಧಿಕಾರಿ ಎಂದು ಪ್ರಧಾನಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಹೇಳನ ಮಾಡಿದ್ದನ್ನು ಖಂಡಿಸಿ ಇಂದು ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.