Home News ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ಪದಚ್ಯುತಿ: ಪಿಐಎಲ್‌ ಅರ್ಜಿ ವಜಾ

ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ಪದಚ್ಯುತಿ: ಪಿಐಎಲ್‌ ಅರ್ಜಿ ವಜಾ

ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಲು ಯಾವುದೇ ಕಾನೂನು ನಿರ್ಬಂಧವಿಲ್ಲ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ವಿಚಾರವನ್ನು ಪರಿಶೀಲಿಸುವುದು ಕಾರ್ಯಾಂಗ ಮತ್ತು ರಾಷ್ಟ್ರಪತಿ ಅವರಿಗೆ ಬಿಟ್ಟದ್ದು. ಇದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು, ಕಾರ್ಯಾಂಗ ರಾಷ್ಟ್ರಪತಿ ಆಡಳಿತ ಹೇರುತ್ತದೆ. ಅವರಿಗೆ ಮಾರ್ಗದರ್ಶನ ನೀಡುವುದು ನಮ್ಮ ಕೆಲಸವಲ್ಲ. ಇದರಲ್ಲಿ ನಾವು ಹೇಗೆ ಮಧ್ಯಪ್ರವೇಶಿಸಲು ಸಾಧ್ಯ? ಕಾರ್ಯಾಂಗ ಇದೆಲ್ಲವನ್ನೂ ಪರಿಶೀಲಿಸುತ್ತಿದೆ ಎಂದು ಖಾತ್ರಿಯಿದೆ ಎಂಬುದಾಗಿ ನ್ಯಾಯಾಲಯ ಹೇಳಿದೆ. ಇದೆ ವೇಳೆ ಕೇಜ್ರಿವಾಲ್ ಸಿಎಂ ಆಗಿ ಮುಂದುವರಿಯಲು ಯಾವುದೇ ಕಾನೂನು ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

Exit mobile version