ಬೆಂಗಳೂರು: ದಲಿತರ ಭೂಮಿಯನ್ನು ಕಬಳಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತಮ್ಮ ವಿರುದ್ಧದ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದಲ್ಲದೆ, ರಾಜ್ಯಪಾಲರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್‌ಗೆ ಹೈಕೋರ್ಟ್ ಅನುಮತಿ ನೀಡಿರುವುದು ಸತ್ಯಕ್ಕೆ ಸಿಕ್ಕ ಜಯ ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಸಿದ್ದರಾಮಯ್ಯನವರು ನಡೆಸಿದ್ದ ಕುತಂತ್ರಗಳಿಗೆ ಹೈಕೋರ್ಟ್ ಆದೇಶ ಕಪಾಳಮೋಕ್ಷ ಮಾಡಿದಂತಾಗಿದೆ. ಬಡವರ ಭೂಮಿ ಕಸಿದ ಪಾಪ, ರಾಜಕೀಯಕ್ಕೆ ರಾಜ್ಯಪಾಲರನ್ನು ನಿಂದಿಸಿದ ಪಾಪ ಸುಮ್ಮನೆ ಬಿಟ್ಟೀತೇ?. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನೈತಿಕ ಹೊಣೆ ಹೊತ್ತು ಇನ್ನಾದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.