ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್​

0
10

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ನೋಟಿಸ್ ನೀಡಿದೆ. ಇಂದು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿಯ ವಿಚಾರಣೆ ನಡೆಯುತ್ತಿರುವ ಹೊತ್ತಲ್ಲೇ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್​​ ಜಾರಿ ಮಾಡಿದೆ. ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.

Previous articleಸಿಎಂ ಮುಡಾ ಪ್ರಕರಣ: ವಿಚಾರಣೆ ಪ್ರಾರಂಭಿಸಿದ ಹೈಕೋರ್ಟ್
Next articleನಟ ಶಿವರಾಜ್ ಕುಮಾರ್  ಭೇಟಿಯಾದ ಸಿಎಂ ಸಿದ್ದರಾಮಯ್ಯ