ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೇಸ್ ನಂಬರ್ 11/2024 ಅಡಿ ಲೋಕಾಯುಕ್ತ ಎಸ್ಪಿ ಉದೇಶ್ ರಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1, ಸಿಎಂ ಪತ್ನಿ ಬಿ.ಎನ್ ಪಾರ್ವತಿ A2, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ A3 ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು A4 ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ