ಮುಡಾ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ

0
25

ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಾಯುಕ್ತದೆದುರು ಸಿದ್ದರಾಮಯ್ಯನವರು ವಿಚಾರಣೆಗೆ ಹಾಜರಾಗಿದ್ದಾರೆ. ಈ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ಮುಳುಗಿರುವುದು ಎಲ್ಲರಿಗೂ ತಿಳಿದಿದೆ. ನನ್ನ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ಲೋಕಾಯುಕ್ತದ ಬದಲು ಸಿಬಿಐ ತನಿಖೆ ಎದುರಿಸಲಿ ಎಂದಿದ್ದಾರೆ.

Previous articleಸಂಡೂರಿನಲ್ಲಿ ಮೂರು ದಿನ ಸಿಎಂ ಕಾರ್ಯಕ್ರಮ
Next articleಚುನಾವಣೆ ಪ್ರಚಾರದ ಮೇಲೆ‌ ಕಾಂಗ್ರೆಸ್ ಕ್ಯಾಂಪಸ್ ‌ಕಣ್ಣು