Home ತಾಜಾ ಸುದ್ದಿ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಬಿಜೆಪಿಯ ಅಸಮಾಧಾನ ಕೆಲವೇ ದಿನಗಳಲ್ಲಿ ಸ್ಫೋಟ

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್: ಬಿಜೆಪಿಯ ಅಸಮಾಧಾನ ಕೆಲವೇ ದಿನಗಳಲ್ಲಿ ಸ್ಫೋಟ

0

ವಿಜಯಪುರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ವಪಕ್ಷದವರ ವಿರುದ್ಧವೇ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾನೆ. ಕಾಂಗ್ರೆಸ್​ಗೆ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು ಸೇರಿದ್ದಾರೆ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.
ಮುಡಾ ಹಗರಣದಲ್ಲಿ ಯಡ್ಡಿಯೂರಪ್ಪ ಇದ್ದಾರೋ, ವಿಜಯೇಂದ್ರ ಇದ್ದಾರೋ, ಯಡ್ಡಿಯೂರಪ್ಪ ಅಕ್ಕನ ಮಕ್ಕಳು ಇದ್ದಾರೋ, ರಾಜೀವ್ ಅದರೋ, ಮತ್ಯಾರು ಇದ್ದಾರೆ ಎಲ್ಲರೂ ಸಿಕ್ಕಿ ಬೀಳುತ್ತಾರೆ. ರಾಜೀವ್ ಯಡ್ಡಿಯೂರಪ್ಪ ಶಿಷ್ಯನೋ, ಏನು ವಿಜಯೇಂದ್ರ ಶಿಷ್ಯನೋ ಯಾರೆಂದು ಹೇಳಬೇಕು. ಅವರನ್ನೇ ಕೇಳಿ ರಾಜೀವ್ ನಿಮ್ಮ ಶಿಷ್ಯ ಇದ್ದಾನೆ ಏಕೆ ಪಾದಯಾತ್ರೆ ಮಾಡುತ್ತಿದ್ದೀರಿ ಅಂತಾ ವಿಜಯೇಂದ್ರನನ್ನು‌ಕೇಳಬೇಕು ಎಂದಿದ್ದಾರೆ.

Exit mobile version