ಮುಡಾ ಹಗರಣ: ಧಾರವಾಡ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ

0
29

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಸ್ನೇಹಮಯಿ ಕೃಷ್ಣ ಒತ್ತಾಯ

ಹುಬ್ಬಳ್ಳಿ : ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಧಾರವಾಡ ಪೀಠದಲ್ಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಡ್ ಪೀಠಕ್ಕೆ ತೆರಳುವ ಮುನ್ನ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ , ಸಿಬಿಐ ತನಿಖೆಯಿಂದ ನ್ಯಾಯ ಸಿಗುವ ಭರವಸೆ ಇದೆ. ರಾಜ್ಯದಲ್ಲಿ ಅವರದೇ ಸರ್ಕಾರ, ಅವರೇ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಸಿಬಿಐನಿಂದಲೇ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ಮೂಲಕ ತನಿಖೆಗೆ ಸಹಕರಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದರು.

Previous articleಕನ್ನಡ ಚಿತ್ರರಂಗದ ಹಿರಿಯನಟ ಸರಿಗಮ ವಿಜಿ ಇನ್ನಿಲ್ಲ
Next articleವಿಶ್ವಗುರು ಬಸವಣ್ಣ ಮೂರ್ತಿಗೆ ಅವಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ