ಮುಡಾ ಹಗರಣ: ಬಿಜೆಪಿಯಿಂದ ಅಹೋರಾತ್ರಿ ಧರಣಿ

0
17

ಬೆಂಗಳೂರು: ಮುಡಾ ಹಗರಣ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದ ವಿಪಕ್ಷ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತು.
ಪ್ರಶ್ನೋತ್ತರ ಕಲಾಪ ಬದಿಗೊತ್ತಿ ಮುಡಾ ಹಗರಣ ಚರ್ಚೆಗೆ ಅವಕಾಶ ಕೊಡಿ ಎಂದು ಕೆಳಮನೆ ಮತ್ತು ಮೇಲ್ಮನೆಯಲ್ಲಿ ಬಿಜೆಪಿ ಸದಸ್ಯರು ಒತ್ತಾಯಿಸಿದ್ದಾರೆ. ಸ್ಪೀಕರ್ ಚರ್ಚೆಗೆ ಅವಕಾಶ ನೀಡಲು ಒಪ್ಪದ ಸ್ಪೀಕರ್​ ನಡೆಯಿಂದ ಆಕ್ರೋಶಗೊಂಡ ಬಿಜೆಪಿ, ಜೆಡಿಎಸ್ ಸದಸ್ಯರು, ಭಾರಿ ಗದ್ದಲ ಉಂಟಾಯಿತು ನಂತರ ಸದನದ ಕಲಾಪ ಮುಂದೂಡಲಾಯಿತು. ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿರುವ ಬಿಜೆಪಿ ರಾಜ್ಯದ್ಯಾಕ್ಷ ಬಿ ವೈ ವಿಜಯೇಂದ್ರ ಅವರು, ಮುಡಾ ಹಗರಣ ಹಾಗೂ ರಾಜ್ಯದ ಎಸ್ಸಿ/ಎಸ್ಟಿ ಸಮುದಾಯಕ್ಕಾದ ಅನ್ಯಾಯದ ವಿರುದ್ಧ ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಉಭಯ ಸದನಗಳಲ್ಲಿ ಇಂದು ಅಹೋರಾತ್ರಿ ಧರಣಿ ನಡೆಸಲಿದ್ದೇವೆ ಎಂದಿದ್ದಾರೆ.

Previous articleಅಗ್ನಿವೀರ್‌: ಗುಡ್‌ನ್ಯೂಸ್ ನೀಡಿದ ಕೇಂದ್ರ
Next articleಹೊರಗುತ್ತಿಗೆ ನೌಕರರ ಸಮಸ್ಯೆ ಪರಿಹಾರಕ್ಕೆ ಕ್ರಮ