ಮುಡಾ ಹಗರಣ: ಸಿಎಂಗೆ ಸಪ್ತ ಪ್ರಶ್ನೆ ಹಾಕಿದ ಆರ್‌ ಅಶೋಕ್‌

0
8

ಬೆಂಗಳೂರು: ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಇದೀಗ ಪ್ರತಿಪಕ್ಷ ನಾಯಕ ಆರ್ ಅಶೋಕ ಸಿಎಂ ಸಾನಾಜಿಕ ಜಾಲತಾಣದಲ್ಲಿ ಸಪ್ತ ಪ್ರಶ್ನೆಗಳ ಮೂಲಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಪೋಸ್ಟ್‌ ಮಾಡಿರುವ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ. ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ?

1.) ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?

5.) ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?

7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದಿದ್ದಾರೆ.

Previous articleಫೀಲ್ಡಿಗಿಳಿದ ಪಾಲಿಕೆ ಆಯುಕ್ತ: 50ಲಕ್ಷ ಮೌಲ್ಯದ 35 ಟನ್ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ
Next articleಇವಿಎಂ ಮೂಲಕವೇ ಗೆದ್ದು ಇವಿಎಂ ರದ್ದು ಮಾಡುತ್ತೇವೆ…