Home ತಾಜಾ ಸುದ್ದಿ ಮುಡಾ ಹಗರಣ ಸಿಬಿಐ ತನಿಖೆಗೆ ಆಗ್ರಹ

ಮುಡಾ ಹಗರಣ ಸಿಬಿಐ ತನಿಖೆಗೆ ಆಗ್ರಹ

0

ಬೆಂಗಳೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರೂ. 3800 ಕೋಟಿ ವೆಚ್ಚದ ಮುಡಾ ಹಗರಣದಲ್ಲಿ, ಮುಡಾದಿಂದ ಅಧಿಕೃತವಾದ ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಯ ಹೆಸರಿಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಮುಡಾಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಅಂದಿನ ಡಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ಹಗರಣವನ್ನು ಮುಚ್ಚಿ ಹಾಕಲು ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ನಮ್ಮ ಆಗ್ರಹ ಎಂದಿದ್ದಾರೆ.

Exit mobile version