ಮುನಿರತ್ನ ಜಾತಿ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

0
26

ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಅವರಿಂದ ಹಣ ಪಡೆದು ವಂಚಿಸಿ, ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಮುನಿರತ್ನ ಅವರು ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ತೀರ್ಪು ಕಾಯ್ದಿರಿಸಿತು.
ಮುನಿರತ್ನ ಪರವಾಗಿ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದರು. ಶಾಸಕ ಮುನಿರತ್ನ ತಮ್ಮಿಂದ ೨೦ ಲಕ್ಷ ರು. ಹಣ ಪಡೆದು ವಂಚಿಸಿದ್ದಾರೆ. ಹಣ ಹಿಂದಿರುಗಿಸಲು ಕೇಳಿದಕ್ಕೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ನನ್ನ ಜಾತಿ ಹೆಸರು ತೆಗೆದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಗುತ್ತಿದಾರ ಚೆಲುವರಾಜು ಕಳೆದ ವರ್ಷ ಸೆ.೧೩ರಂದು ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

Previous articleಸರ್ಕಾರ ದಿವಾಳಿ, ಗುತ್ತಿಗೆದಾರರಿಗೆ ಕೊಡಲೂ ಹಣ ಇಲ್ಲ
Next articleಮಹಾ ಡಿಸಿಎಂ ಶಿಂದೆಯನ್ನು ಕಾರಲ್ಲೇ ಸ್ಫೋಟಿಸುವ ಬೆದರಿಕೆ