Home ನಮ್ಮ ಜಿಲ್ಲೆ ಚಿತ್ರದುರ್ಗ ಮುರುಘಾಶ್ರೀ ಅರ್ಜಿ ವಿಚಾರಣೆ ಮುಂದೂಡಿಕೆ

ಮುರುಘಾಶ್ರೀ ಅರ್ಜಿ ವಿಚಾರಣೆ ಮುಂದೂಡಿಕೆ

0

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಅಕ್ಟೋಬರ್‌ 16ಕ್ಕೆ ಮುಂದೂಡಿದೆ.
ಅತ್ಯಾಚಾರ ಮತ್ತು ಪೋಕ್ಸೊ ಮತ್ತಿತರ ಆರೋಪದಲ್ಲಿ ಪರಿಗಣಿಸಿರುವುದನ್ನು ಪ್ರಶ್ನಿಸಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಿಂದ ವಿಚಾರಣೆ ನಡೆಸಿತು. ಮುರುಘಾ ಶರಣರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್‌, ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರ ವಾದ ವಿವಾದವನ್ನು ಆಲಿಸಿ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಅಕ್ಟೋಬರ್‌ 16ಕ್ಕೆ ಮುಂದೂಡಿದೆ.

Exit mobile version