ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.
ಮುಳ್ಳಯ್ಯನಗಿರಿ ಪ್ರದೇಶಕ್ಕೆ ಸಾಗುವ ಮಾರ್ಗದಲ್ಲಿನ ರಸ್ತೆ ಮೇಲೆ ಎರಡು ಅಡಿಗಳಷ್ಟು ನೀರು ಹರಿದಿದೆ. ಗುಡ್ಡದ ಇಳಿಜಾರು ಪ್ರದೇಶದಿಂದ ಮಳೆಯ ನೀರು ಜಲಪಾತದಂತೆ ಹರಿದು ಬಂದಿದ್ದು, ಇಲ್ಲಿಗೆ ತೆರಳಿದ್ದ ಪ್ರವಾಸಿಗರು ಮಳೆಯಲ್ಲಿ ನೆಂದು ತೊಪ್ಪೆಯಾಗಿದ್ದಾರೆ.
ಪ್ರವಾಸಿಗರೊಬ್ಬರು ತಮ್ಮ ಮೊಬೈಲ್‌ನಲ್ಲಿ ಗಿರಿ ಪ್ರದೇಶದ ರಸ್ತೆ ಮೇಲೆ ನೀರು ಹರಿಯುತ್ತಿರುವುದನ್ನು ವಿಡಿಯೋ ಮಾಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಇದೇ ಮೊದಲ ಭಾರೀ ಈ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಇಲ್ಲಿನ ಸುತ್ತಮುತ್ತಲ ಜನರು ಮಾತನಾಡುತ್ತಿದ್ದಾರೆ.