ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿರುವ ಅವರು, ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಮಂಡಳಿ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು. ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದರು.