ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಅಸ್ತಿತ್ವದಲ್ಲಿರುವ ಪರಿಸರ ವ್ಯವಸ್ಥೆಯನ್ನು ನವೀಕರಿಸಲು ರಾಜ್ಯ ಸರ್ಕಾರ ಎರಡು ಭೂ ಭಾಗಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಕ್ಲಸ್ಟರ್ ಸ್ಥಾಪಿಸಲು ಕೇಂದ್ರ ಸರ್ಕಾರದ ಮಾರ್ಪಡಿಸಿದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲು ಇನ್ನೂ ಎರಡು ಇಎಂಸಿಗಳನ್ನು ಸ್ಥಾಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ನೂತನವಾಗಿ ರಚನೆಗೊಂಡ ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕರ್ನಾಟಕದ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಐ ಅಂಡ್ ಬಿ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಮುಂದಿಟ್ಟರು.