Home ತಾಜಾ ಸುದ್ದಿ ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

0

ಬೆಂಗಳೂರು: ಮೂವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗ ಮಾಡಿ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ.
ಶಿಕ್ಷಣ, ವೈದ್ಯಕೀಯ ಶಿಕ್ಷಣ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ವರ್ಗಾವಣೆಯಾಗಿದೆ. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ಮೊಹ್ಸಿನ್‌ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರ್ಗಾಯಿಸಿದೆ. ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ.ಎನ್‌.ವಿ.ಪ್ರಸಾದ್‌ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಕರ್ನಾಟಕ ಶಾಲೆ ಶಿಕ್ಷಣ ಮೌಲ್ಯಮಾಪನ ಹಾಗೂ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿದ್ದ ಎನ್‌.ಮಂಜುಶ್ರೀ ಅವರನ್ನು ವರ್ಗ ಮಾಡಲಾಗಿದೆ. ಅವರನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.

Exit mobile version