ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್‌ನಲ್ಲಿ ಬೆಂಕಿ

0
22

ರಾಯಚೂರು : ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.
ಮೃತದೇಹವನ್ನ ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್‌ನ ಇಂಜಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ರಾಯಚೂರಿನಿಂದ ಉಡಮಗಲ್ ಗ್ರಾಮಕ್ಕೆ ಹೊರಟಿದ್ದ ಅಂಬುಲೆನ್ಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ದಟ್ಟ ಹೊಗೆಯೊಂದಿಗೆ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಕುಟುಂಬಸ್ಥರು ಮೃತದೇಹವನ್ನು ಬೇರೆ ವಾಹನದಲ್ಲಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

Previous articleಸಿದ್ದರಾಮಯ್ಯ ಅವರದ್ದು ತಾಲಿಬಾನಿ ಸರ್ಕಾರ
Next articleಅಧಿಕಾರಿಗಳ ವಿರುದ್ಧ ಮಾತಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ