ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ

0
31

ಬೆಂಗಳೂರು: ʼನಮ್ಮ ಮೆಟ್ರೋ ʼ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯದ ಕೈಯಲ್ಲಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರದ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ತಿರುಗೇಟು ನೀಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಯಾಣ ದರ ಏರಿಕೆ ಮಾಡಿದೆ ಎಂಬುದು ಸುಳ್ಳು. ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿದ್ದಾರೆ.
ಮೆಟ್ರೋ ಸಂಬಂಧಿತ ಎಲ್ಲಾ ಜವಾಬ್ದಾರಿಗಳೂ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲಿವೆ. ದರ ನಿಗದಿ ಸಮಿತಿ ದೆಹಲಿಯಲ್ಲಿಲ್ಲ. ಕರ್ನಾಟಕದಲ್ಲಿಯೇ ಇದೆ. ಮೆಟ್ರೋ ಸಂಬಂಧ ಎಲ್ಲ ವಿಚಾರಗಳಿಗೂ ರಾಜ್ಯ ಸರ್ಕಾರವೇ ಕಾರಣ. ಕೇಂದ್ರದಿಂದ ದರ ಏರಿಕೆಗೆ ಯಾವುದೇ ಸೂಚನೆ ನೀಡಿಲ್ಲ. ವೃಥಾ ಕೇಂದ್ರದ ಮೇಲೆ ತಪ್ಪು ಹೊರಿಸುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

Previous articleಸಂಗೀತದಿಂದ ಆತ್ಮೋನ್ನತಿ ಸಾಧ್ಯ
Next articleಸಾಲ ವಸೂಲಾತಿಗಾಗಿ ಉದ್ಯಮಿಗೆ 36ಗಂಟೆ ಚಿತ್ರಹಿಂಸೆ