ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ 10 ಸ್ಥಳಗಳ ಪೈಕಿ 8 ಕಡೆಗಳಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಎಂಆರ್ ಸಿಎಲ್ ಅವರು ಟೆಂಡರ್ ಕರೆದಿದ್ದು, ಅಮೂಲ್ ಹೊರತಾಗಿ ಬೇರೆ ಯಾರೂ ಮಳಿಗೆಗಳಿಗೆ ಅರ್ಜಿ ಹಾಕಿಲ್ಲ. ಕೆಎಂಎಫ್ ಕೂಡ ಅರ್ಜಿ ಹಾಕಿರಲಿಲ್ಲ. ಈಗ ಕೆಎಂಎಫ್‌ನವರಿಗೆ ನಾವು ಅರ್ಜಿ ಹಾಕುವಂತೆ ಸೂಚಿಸಿದ್ದು, ಟೆಂಡರ್ ಕರೆಯಲಾಗಿದ್ದ 10 ಕಡೆಗಳ ಪೈಕಿ ಎರಡು ಕಡೆ ಅಮೂಲ್ ಅವರು ಜಾಗತಿಕ ಟೆಂಡರ್‌ನಲ್ಲಿ ಅರ್ಜಿ ಹಾಕಿ ಮಳಿಗೆ ತೆರೆದಿದ್ದಾರೆ. ತೆರೆಯಲಾಗಿರುವ ಮಳಿಗೆ ಮುಚ್ಚಿಸುವುದು ಸರಿಯಲ್ಲ. ಉಳಿದ 8 ಸ್ಥಳಗಳಲ್ಲಿ ಕೆಎಂಎಫ್ ಮಳಿಗೆಗೆ ಅವಕಾಶ ನೀಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.