ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಕೆಲ ಆಟಗಾರರು ಭಾರತಕ್ಕೆ ಮರಳಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಭಾರತೀಯ ಆಟಗಾರರಿಗೆ ಭವ್ಯ ಸ್ವಾಗತ ನೀಡಲಾಯಿತು. ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಕಂಚಿನ ಪದಕವನ್ನು ಗೆದ್ದ ನಂತರ ದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣಕ್ಕೆ ಭಾರತೀಯ ಪುರುಷರ ಹಾಕಿ ತಂಡವು ಭೇಟಿ ನೀಡಿ ಅವರಿಗೆ ಗೌರವ ಸಲ್ಲಿಸಿತು.