Home ತಾಜಾ ಸುದ್ದಿ ಮೇಯರ್, ಉಪ ಮೇಯರ್ ಸ್ಥಾನಕ್ಕೆ 5 ನಾಮಪತ್ರ ಸಲ್ಲಿಕೆ

ಮೇಯರ್, ಉಪ ಮೇಯರ್ ಸ್ಥಾನಕ್ಕೆ 5 ನಾಮಪತ್ರ ಸಲ್ಲಿಕೆ

0

ಹುಬ್ಬಳ್ಳಿ: ಹು-ಧಾ ಮಹಾನಗರದ ಮೇಯರ್-ಉಪ ಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಮೇಯರ್ ಸ್ಥಾನಕ್ಕೆ 3 ಮತ್ತು ಉಪ ಮೇಯರ್ ಸ್ಥಾನಕ್ಕೆ 2 ನಾಮಪತ್ರ ಸಲ್ಲಿಕೆಯಾಗಿವೆ.

ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ರಾಮಣ್ಣ ಬಡಿಗೇರ ಹಾಗೂ ಉಪ ಮೇಯರ್ ಸ್ಥಾನಕ್ಕೆ ದುರ್ಗಮ್ಮ ಬೀಜವಾಡ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಾಳಯದಿಂದ ಇಮ್ರಾನ್ ಎಲಿಗಾರ ಮೇಯರ್ ಹಾಗೂ ಮಂಗಳಾ ಹಿರೇಮನಿ ಉಪ ಮೇಯರ್ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕೇವಲ ಮೂರು ಸದಸ್ಯರನ್ನು ಹೊಂದಿರುವ AIMIM ಪಕ್ಷದ ನಜೀರಹ್ಮದ್ ಹೊನ್ಯಾಳ ಕೂಡ ಮೇಯರ್ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಪ ಮೇಯರ್ ಸ್ಥಾನ ಎಸ್ ಸಿ ಮಹಿಳೆಗೆ ಮೀಸಲಾಗಿರುವುದರಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

Exit mobile version