Home ಅಪರಾಧ ಮೇಲ್ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರು ಸಾವು

ಮೇಲ್ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರು ಸಾವು

0

ಹಾವೇರಿ(ಸವಣೂರು): ಎರಡ್ಮೂರು ದಿನದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಎರಡು ವರ್ಷದ ಅವಳಿ ಮಕ್ಕಳು, ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಧಾರುಣ ಘಟನೆ ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವದಲ್ಲಿ ಸಂಭವಿಸಿದೆ.
ಅವಳಿ ಮಕ್ಕಳಾದ ಅನನ್ಯ (೨), ಅಮೂಲ್ಯ (೨) ಹಾಗೂ ಇವರ ಅತ್ತೆ ಚೆನ್ನಮ್ಮ ಮೃತಪಟ್ಟಿದ್ದಾರೆ. ಮೃತ ಮಕ್ಕಳ ತಂದೆ ಮುತ್ತು, ತಾಯಿ ಸುನೀತಾ ಅಪಾಯದಿಂದ ಪಾರಾಗಿದ್ದು, ಸವಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃದ್ಧೆ ಯಲ್ಲಮ್ಮ ಗಂಭೀರ ಗಾಯಗೊಂಡಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Exit mobile version