ಮೇಲ್ಛಾವಣಿ ಕುಸಿದು ಮಹಿಳೆ ಸಾವು

0
31
ಸಾವು

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮನೆಯಲ್ಲಿ ಮಲಗಿದ್ದ ಗೃಹಿಣಿ ಸಾವನ್ನಪ್ಪಿದ ಘಟನೆ ನಡೆದಿದೆ.
ಜಿಲ್ಲೆy ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆ ಸಂಗೀತಾ ಗಂಡ ಬಾಳಾಸಾಹೇಬ ಪಾಟೀಲ್ (30) ಎನ್ನಲಾಗಿದೆ, ರಾತ್ರಿಯಿಡಿ ಭಾರೀ ಮಳೆ ಸುರಿದ ಪರಿಣಾಮ ಮನೆ ಸೋರುತ್ತಿದ್ದರಿಂದ ಮನೆಯಿಂದ ಎದ್ದು ಹೊರ ಬಂದು ಪತಿ ಹಾಗೂ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಆದರೆ ಗೃಹಿಣಿ ಸಂಗೀತಾ ಮೇಲೆ ಮೇಲ್ಛಾವಣಿ ಬಿದ್ದ ಕಾರಣ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತದನಂತರ ಸ್ಥಳೀಯರು ಮಣ್ಣಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಿಕೋಟ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Previous articleತುಳು ಲಿಪಿಯಲ್ಲಿ ಗೀತಾ ಲೇಖನ
Next articleಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರು ಸಾವು