ಮೇಲ್ಸೆತುವೆ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ

0
41
ಮೇಲ್ಸೆತುವೆ ಕಾಮಗಾರಿ
ಆಮ್ ಆದ್ಮಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿ ವಿವಿಧ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ವಿಜಯಪುರ: ಇಬ್ರಾಹಿಂಪುರ ರೈಲ್ವೇ ಗೇಟ್ ಮೇಲ್ಸೆತುವೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು, ಇಲ್ಲವಾದರೆ ಸಾರ್ವಜನಿಕರ ಹಿತದೃಷ್ಟಿಯಿಂದ ದೊಡ್ಡ ಮಟ್ಟದ ಹೋರಾಟಕ್ಕೆ ಅಣಿಯಾಗಲಾಗುವುದು ಎಂದು ಆಪ್ ಪಕ್ಷದ ಜಿಲ್ಲಾಧ್ಯಕ್ಷ ರೋಹನ್ ಐನಾಪುರ ಮೊದಲಾದವರು ವಿವರಿಸಿದರು.
ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಬ್ರಾಹಿಂಪುರ ಗೇಟ್ ಮೇಲ್ಸೇತುವೆ ಕಾಮಗಾರಿಯ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಈ ವಿಷಯ ವ್ಯಕ್ತಪಡಿಸಿದ ಪದಾಧಿಕಾರಿಗಳು, ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸದೆ ಇದ್ದಲ್ಲಿ ಆಮ್ ಆದ್ಮಿ ಪಕ್ಷವು ಉಗ್ರವಾದ ಹೋರಾಟವನ್ನು ಹಮ್ಮಿಕೊಂಡು ಸಾರ್ವಜನಿಕರ ಅನೂಕೂಲಕ್ಕಾಗಿ ರೈಲ್ವೆ ಗೇಟನ್ನು ತೆರುವು ಮಾಡಲು ಅಣಿಯಾಗಬೇಕಾಗುತ್ತದೆ. ಈ ರೈಲ್ವೆ ಮೇಲ್ಸೆತುವೆ ಕಾಮಗಾರಿ ವರ್ಷದಿಂದ ಕುಂಟುತ್ತಾ ಸಾಗಿದೆ. ಇದರಿಂದಾಗಿ ನಿವಾಸಿಗಳು ಅನುಭವಿಸುತ್ತಿರುವ ತೊಂದರೆ ಅಷ್ಟಿಷ್ಟಲ್ಲ. ಮೊದಲೇ ಪೆಟ್ರೋಲ್ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲಿ ನಾಲ್ಕೆöÊದು ಕಿ.ಮೀ. ಸುತ್ತುವರೆದು ಗಣೇಶನಗರ ಮೊದಲಾದದ ಬಡಾವಣೆಗಳಿಗೆ ತಲುಪಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.

ಮೇಲ್ಸೆತುವೆ ಕಾಮಗಾರಿ
Previous articleಎನ್‌ಟಿಪಿಸಿ ಅಧಿಕಾರಿಗಳಿಂದ ಸಮೀಕ್ಷೆ
Next article150 ಮೀಟರ್ ಉದ್ದದ ತಿರಂಗಾ ಭವ್ಯ ಮೆರವಣಿಗೆ