ಮೈಕೆಲ್ ಡಿ ಕುನ್ಹಾ ನೀವು ನ್ಯಾಯಾಧೀಶರು, ಏಜೆಂಟರಲ್ಲಾ

0
22

ಹಾವೇರಿ(ಶಿಗ್ಗಾವಿ): ಪಿಪಿಇ‌ ಕಿಟ್ ಖರೀದಿ ಕುರಿತು ತನಿಖೆ ಮಾಡುತ್ತಿರು ನ್ಯಾ. ಮೈಕೆಲ್ ಡಿ-ಕುನ್ಹಾ ಅವರೇ ನೀವು ನ್ಯಾಯಮೂರ್ತಿ, ನೀವು ಏಜೆಂಟರಲ್ಲಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಯಾವಾಗಲೂ ನಮ್ಮ ವಿರುದ್ಧ ಇದ್ದವರು‌, ಈಗ ಚುನಾವಣೆ ನಡೆದ ಸಂದರ್ಭದಲ್ಲಿ ಯಾಕೆ ಮಧ್ಯಂತರ ವರದಿ ಕೊಡಬೇಕಿತ್ತು. ಒಂದೂವರೆ ವರ್ಷದಿಂದ ಈ ಸರ್ಕಾರ ಏನು ಮಾಡುತ್ತಿತ್ತು. ಚುನಾವಣೆ ಸಂದರ್ಭದಲ್ಲಿ ಜನರ ಮನಸನ್ನು ಬೇರೆ ಕಡೆ ತಿರುಹಿಸಲು ನಾಟಕ ಹೂಡಿದ್ದಾರೆ. ಇದರಲ್ಲಿ ಯಾವುದೇ ಧಮ್ಮಿಲ್ಲ, ಸಿದ್ದರಾಮಣ್ಣ ನೀವು ವಾಲ್ಮೀಕಿ ಹಗರಣದಲ್ಲಿ 190 ಕೋಟಿ ನುಂಗಿಲ್ಲ 90. ಕೋಟಿ ನುಂಗಿದ್ದೇನೆ ಅಂತ ಹೇಳಿದ್ದೀರಿ.‌ ‌ಸಗಣಿ ಎಷ್ಟು ತಿಂದರೂ ಸಗಣಿಯೇ, ನಿಮ್ಮ ಮೇಲಿನ ಆರೊಪ ಮರೆಮಾಚಲು ಈ ರೀತಿಯ ಧಮ್ಕಿ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಮ್ಮ ನಾಯಕ ಯಡಿಯೂರಪ್ಪ ನವರ ಬಗ್ಗೆ ಕುನ್ಹಾ ಕಮಿಷನ್ ರಚನೆ ಮಾಡಿದ್ದಾರೆ. ಕುನ್ಹಾ ಕಮಿಷನ್‌ನವರು ಯಡಿಯೂರಪ್ಪ ಹಾಗೂ ರಾಮುಲು ಅವರಿಗೆ ನೊಟಿಸ್ ನೀಡದೇ ತಾತ್ಕಾಲಿಕ ವರದಿ ನೀಡಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೆ‌ ಕೋರ್ಟ್ ರಾಜೀನಾಮೆ ಕೊಡುವಂತೆ ಹೇಳಿರಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಆಕ್ರೋಶ ಹೊರಹಾಕಿದರು.

Previous articleಕೋವಿಡ್‌ನಲ್ಲಿ ಮೃತಪಟ್ಟ ಕುಟುಂಬಸ್ಥರ ಶಾಪ ಬಿಜೆಪಿಗೆ ತಟ್ಟುತ್ತೆ
Next articleಚಲಿಸುತ್ತಿದ್ದ ಕಾರಿಗೆ ಬೆಂಕಿ