ದಾವಣಗೆರೆ: ಮೈಕ್ರೋ ಫೈನಾನ್ಸ್ ಕಂಪನಿಯೊಂದು ಕಿರುಕುಳ ನೀಡಿದೆ ಎಂದು ಮನನೊಂದು ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕುಕ್ಕವಾಡ ಗ್ರಾಮದಲ್ಲಿ ನಡೆದಿದೆ.
ಜಿ.ಎಂ.ಬಸವರಾಜ್ (೫೬) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೈಕ್ರೋ ಫೈನಾನ್ಸ್ ಕಂಪನಿಯೊಂದರಲ್ಲಿ ೪ ಲಕ್ಷ ರೂ. ಸಾಲ ಮಾಡಿದ್ದರು. ಕಂಪನಿ ಸಿಬ್ಬಂದಿಗಳು ಸಾಲ ಮರಳಿಸಿಲ್ಲ ಎಂದು ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಹದಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಚಿಗಟೇರಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.