Home ಅಪರಾಧ ಮೈಸೂರಿನಲ್ಲಿ ಮಠದ ಸ್ವಾಮೀಜಿಯ ಭೀಕರ ಕೊಲೆ

ಮೈಸೂರಿನಲ್ಲಿ ಮಠದ ಸ್ವಾಮೀಜಿಯ ಭೀಕರ ಕೊಲೆ

0

ಮೈಸೂರು: ಮಠದ ಆವರಣದಲ್ಲಿಯೇ ಮಲಗಿದ್ದ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ ಕೊಲೆಯಾಗಿದೆ.
ನಗರದ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು. ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿದೆ ಎನ್ನಲಾಗಿದೆ, ರವಿ (60) ಎಂಬಾತನಿಂದ ಈ ಕೃತ್ಯ ನಡೆದಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಮಠಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿಗಳು ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

Exit mobile version