ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಶ್ರೀಘ್ರ ಕಾಮಗಾರಿಗೆ ಮನವಿ

ನವದೆಹಲಿ: ಕಲಬುರಗಿ, ವಿಜಯಪುರ, ಮೈಸೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತಂತೆ ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ
ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ಪತ್ರ ನೀಡಿದ್ದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ, ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.