ಮೊಬೈಲ್ ಗೀಳು: ಬಾಲಕ ಆತ್ಮಹತ್ಯೆ

0
21

ಹುಬ್ಬಳ್ಳಿ: ಮೊಬೈಲ್ ಗೀಳಿಗೆ ಅಂಟಿಕೊಂಡಿದ್ದ ಬಾಲಕನಿಗೆ ಪಾಲಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಗಾಮನಗಟ್ಟಿಯಲ್ಲಿ ನಡೆದಿದೆ.
ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿನ ಘಟನೆ ನಡೆದಿದ್ದು, ಸಮೃದ್ಧ(೧೩) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನಿಗೆ ಪಾಲಕರು ಸೋಮವಾರ ರಾತ್ರಿ ಮೊಬೈಲ್ ಹೆಚ್ಚು ಬಳಸಬೇಡ, ಸರಿಯಾಗಿ ಓದು ಎಂದು ಬುದ್ದಿ ಮಾತು ಹೇಳಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಗನ ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ನವನಗರದ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Previous articleRTO ಕೈ ಮಾಡಿದ್ದಕ್ಕೆ ವಿದ್ಯಾರ್ಥಿಗಳಿದ್ದ ವಾಹನ ಪಲ್ಟಿ
Next articleಬಸ್ ಟಿಕೇಟ್ ದರ ಹೆಚ್ಚಳ ಸುಳಿವು