ಮೋದಿ ಇರುವ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಬೆದರಿಕೆ

0
13

ಮುಂಬೈ: ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರು ಎಂದು ತಿಳಿದುಬಂದಿದೆ.
ಈ ಕುರಿತಂತೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದು. ಮೋದಿ ಫ್ರಾನ್ಸ್, ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಈ ಬೆದರಿಕೆ ಬಂದಿತ್ತು. ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿತ್ತು. ಅಪರಿಚಿತರೊಬ್ಬರು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ. ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದರು ಎಂದು ಮಾದ್ಯಮವೊಂದು ವರದಿ ಮಾಡಿದೆ. ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದು. ಫೆಬ್ರವರಿ 12 ರಿಂದ 14 ರವರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ಗೆ ತೆರಳಲಿದ್ದಾರೆ.

Previous articleಪ್ರಧಾನಿ‌ ಮೋದಿ ನಡೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಆಕ್ಷೇಪ
Next articleಆಶ್ರಯ ಮನೆ ನೆಲಸಮ ಮಾಡಲು ಕೋರ್ಟ್ ಆದೇಶ