ಮೋದಿ ದೇಶಕ್ಕೆ ಹಿಡಿದಿರುವ ಶನಿ

0
10

ಕೋಲಾರ: ಮೋದಿ ದೇಶಕ್ಕೆ ಹಿಡಿದಿರುವ ಶನಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಕೋಲಾರದಲ್ಲಿ ಮಾತನಾಡಿರುವ ಅವರು, ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ. ಜೂ. 4ಕ್ಕೆ ನಾವು ಕಾಯುತ್ತಿದ್ದೇವೆ. ಅಂದು ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು. ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಇಂದಿರಾ ಗಾಂಧಿ ಎಲ್ಲ ಜಾತಿ ಜನಾಂಗದವರಿಗೆ ಆತ್ಮಸ್ಥೈರ್ಯ ತುಂಬಿದ್ದರು. ಇಂದಿರಾ ಗಾಂಧಿ ಅಂತವರು ಕೂತಿದ್ದ ಸೀಟಲ್ಲಿ ಎಂತವರು ಬಂದು ಕೂತಿದ್ದಾರೆ. ಸಂತೆಯಲ್ಲಿ ಹಾವಾಡಿಗ ಸುಳ್ಳು ಹೇಳೋದು ಕೇಳಿದ್ದೇವೆ. ಪ್ರಧಾನಿ ಸುಳ್ಳು ಹೇಳೋದು ಈ ಪ್ರಪಂಚದಲ್ಲಿಯೇ ಕೇಳಿರಲಿಲ್ಲ ಎಂದು ಪ್ರಧಾನಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

Previous articleವಿವಾದಾತ್ಮಕ ವಿಷಯಗಳಿಗೆ ಬಿಜೆಪಿ ಆದ್ಯತೆ
Next articleಕೊಲೆ ರಹಸ್ಯ ಬಾಯ್ಬಿಟ್ಟ ಫಯಾಜ್