Home ನಮ್ಮ ಜಿಲ್ಲೆ ಕಲಬುರಗಿ ಮೋದಿ ಫಾರೆನ್ ಪಾಲಿಸಿಗೆ ಖರ್ಗೆ ಅಸಮಾಧಾನ

ಮೋದಿ ಫಾರೆನ್ ಪಾಲಿಸಿಗೆ ಖರ್ಗೆ ಅಸಮಾಧಾನ

0

ಕಲಬುರಗಿ: ಮೋದಿ ಅವರು ಎಲ್ಲವೂ ಪರ್ಸನಲ್ ಆಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೊದಲು ನಾವು ನಮ್ಮ ನೆರೆಹೊರೆಯ ರಾಷ್ಟ್ರಗಳ ಜತೆಯಲ್ಲಿ ಸಂಬಂಧ ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜತೆ ಮಾತನಾಡಿ ಕೆಟ್ಟ ಪರಿಸ್ಥಿತಿ ಬಂದಾಗ ನಾವು ಹೋರಾಟಕ್ಕೂ ಸಿದ್ದರಾಗಬೇಕಾಗುತ್ತದೆ. ಇಂದಿರಾಗಾಂಧಿ ಯಾವ ರೀತಿ ಪಾಕಿಸ್ತಾನವನ್ನು ಬೇರ್ಪಡಿಸಿ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಅಂತಹ ಹೋರಾಟ ಮಾಡಬೇಕಾಗುತ್ತದೆ ಎಂದರು. ಅಂತರಾಷ್ಟ್ರೀಯ ಪಾಲಿಸಿ ವಿಚಾರದಲ್ಲಿ ಮೋದಿಯವರು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಯಾವಾಗ ಯಾರನ್ನು ಬೇಕಾದರೂ ತಬ್ಬಿಕೊಳ್ಳುತ್ತಾರೆ, ಯಾರನ್ನು ಬೇಕಾದರೂ ತೆಗಳುತ್ತಾರೋ ಗೊತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ಮಾಲ್ಡೀವ್ಸ್ ವಿಚಾರದಲ್ಲಿ ಪ್ರಧಾನಿ ಮೋದಿ ನಡೆ ಸರ್ವಸಮ್ಮತವಲ್ಲ ಎಂದರು.

Exit mobile version