Home ತಾಜಾ ಸುದ್ದಿ ಮೋದಿ ಭೇಟಿಗಾಗಿ ಸಮಯ ಕೇಳಿದ ಖರ್ಗೆ

ಮೋದಿ ಭೇಟಿಗಾಗಿ ಸಮಯ ಕೇಳಿದ ಖರ್ಗೆ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗಾಗಿ ಸಮಯ ಕೇಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಸುಮಾರು 2 ಪುಟಗಳ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿಯವರು ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿಯವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.

Exit mobile version