ಮೋದಿ, ಶಾ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್‌

0
123

ಉತ್ತರ ಕನ್ನಡ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಸಂಡೆ ಮಾರ್ಕೆಟ್ ನಿವಾಸಿ ಅನೀಸ್ ಹುಲ್ಗರ್ ಎಂಬಾತನೇ ಬಂಧಿತ ಆರೋಪಿ. ಆರೋಪಿ ಅನೀಸ್ ಹುಲ್ಗರ್, ಎರಡು ಕೋಮಿನ ಜನರ ಮಧ್ಯೆ ವೈಷಮ್ಯ ಬೆಳೆಯುವಂತೆ ಮಾಡಲು ಪ್ರಚೋದಿಸುತ್ತಿದ್ದಾನೆ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತಿದ್ದಾನೆ ಎಂದು ದಾಂಡೇಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Previous articleಚಾಮರಾಜನಗರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿರಾಯನ ದರ್ಶನ
Next articleಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನ