ಮೌಲಾನಾ ಮೇಲೆ FIR ಯಾವಾಗ…

0
63

ಬೆಂಗಳೂರು: ಮೌಲಾನಾ ಅಬು ತಾಲಿಬ್ ರೆಹಮಾನಿ ಅವರ ಮೇಲೆ FIR ಯಾವಾಗ ಹಾಕುತ್ತೀರಿ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು “ನ್ಯಾಯಾಲಯದ ಮಾತನ್ನೂ ಕೇಳುವುದಿಲ್ಲ. ಸಂಸತ್ತು ನಿಮ್ಮದಾದರೆ, ಬೀದಿಗಳು ನಮ್ಮದು” ಎಂದು ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಮಾತುಗಳನ್ನು ಆಡಿರೋ ಮೌಲಾನಾ ಅಬು ತಾಲಿಬ್ ರೆಹಮಾನಿ ಅವರ ಮೇಲೆ FIR ಯಾವಾಗ ಹಾಕುತ್ತೀರಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ? ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಒಬ್ಬ ಹಿಂದೂ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಬಹಿರಂಗ ಕ್ಷಮೆ ಕೇಳಿದ ಮೇಲೂ ಅವರ ಮೇಲೆ FIR ಹಾಕಿ ವಿಚಾರಣೆಗೆ ಕರೆಯುವ ಕಾಂಗ್ರೆಸ್ ಸರ್ಕಾರಕ್ಕೆ, ಸಂವಿಧಾನ, ನ್ಯಾಯಾಲಯದ ಘನತೆ ಎಲ್ಲವನ್ನೂ ಗಾಳಿಗೆ ತೂರಿ ಪ್ರಚೋದನಕಾರಿ ಭಾಷಣ ಮಾಡುವ ಮುಸ್ಲಿಂ ಮತಾಂಧರು ನಿಮ್ಮ ಕಣ್ಣಿಗೆ ಕಾಣುವುದಿಲ್ಲ ಅಲ್ಲವೇ? ಕರ್ನಾಟಕ ಕಾಂಗ್ರೆಸ್‌ ಪಕ್ಷದ ಓಲೈಕೆ ರಾಜಕಾರಣವೇ ಅದಕ್ಕೆ ಮುಳುವಾಗಲಿದೆ. ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಅಡ್ರೆಸ್ ಇಲ್ಲದಂತಾಗಿರುವ ಹಿಂದೂ ವಿರೋಧ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ನಿರ್ನಾಮ ಆಗುವ ದಿನ ಬಹಳ ದೂರವಿಲ್ಲ ಎಂದರು.

ಮೌಲ್ವಿ ಮೌಲಾನಾ ಅಬು ತಾಲಿಬ್ ರೆಹಮಾನಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಮಂಡ್ಯದ ಬಿಜೆಪಿ ಕಾರ್ಯಕರ್ತರು ದೂರು ನೀಡಿದ್ದಾರೆ.

Previous articleನಿವೃತ್ತ ಪ್ರಾಧ್ಯಾಪಕ ಪ್ರಮೋದ್ ಮುತಾಲಿಕ್ ನಿಧನ
Next articleವಿಕಲಚೇತನರು ಸಮಾಜಕ್ಕೆ ಆದರ್ಶಪ್ರಾಯರು