Home ನಮ್ಮ ಜಿಲ್ಲೆ ಉಡುಪಿ ಯಕ್ಷಗಾನ ಯುವ ಕಲಾವಿದ ಆತ್ಮಹತ್ಯೆ

ಯಕ್ಷಗಾನ ಯುವ ಕಲಾವಿದ ಆತ್ಮಹತ್ಯೆ

0

ಉಡುಪಿ: ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು ೧೨ ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (೨೬) ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂದಾರ್ತಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹಾರಾಡಿ ರಮೇಶ ಗಾಣಿಗ ಅವರಿಂದ ಯಕ್ಷಗಾನ ನೃತ್ಯಾಭ್ಯಾಸ ಮಾಡಿದ ಭರವಸೆಯ ಕಲಾವಿದರಾಗಿದ್ದ ಅವರು, ಮುಂದಿನ ತಿರುಗಾಟಕ್ಕೆ ಹಾಲಾಡಿ ಮೇಳಕ್ಕೆ ನೇಮಕಗೊಂಡಿದ್ದರು.
ಮೃತರು ತಾಯಿ, ತಮ್ಮನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version