Home ತಾಜಾ ಸುದ್ದಿ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

0

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪರನ್ನು ಬಂಧಿಸದಂತೆ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿರುವ ಹೈಕೋರ್ಟ್ ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಿದೆ.
ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದತಿ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ನಡೆಸಿತು. ಹೈಕೋರ್ಟ್ ಏಕಸದಸ್ಯ ಪೀಠ ವಾದ ವಿವಾದಗಳನ್ನು ಆಲಿಸಿ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ವಿಸ್ತರಿಸಿ ಸೆ.5 ಕ್ಕೆ ವಿಚಾರಣೆ ಮುಂದೂಡಿದೆ.

Exit mobile version