ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

0
23

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ ಬಂಧನವಾಗಲಿದೆ.
ಸಿಟಿ ಸಿವಿಲ್ ಕೋರ್ಟ್ ಒಂದನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್​ ಅನ್ನು ಜಾರಿಗೊಳಿಸಿದೆ. ಕೋರ್ಟ್​ ಅರೆಸ್ಟ್​ ವಾರೆಂಟ್​ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.
ಮಾರ್ಚ್ 14 ರಂದು ದೂರು ನೀಡಲಾಗಿದೆ. ಬಿಎಸ್ ವೈ ಜೊತೆ ಮಾತನಾಡಿದ ವಿಡಿಯೋ ರೆಕಾರ್ಡಿಂಗ್ ಇದೆ. ಎಸಿಎಂಎಂ 25ರ ನ್ಯಾಯಾಧೀಶರ ಮುಂದೆ ಸಿಆರ್ ಪಿಸಿ 164 ಅಡಿ ಹೇಳಿಕೆ ದಾಖಲಿಸಿದ್ದಾರೆ. ಸಂತ್ರಸ್ತೆ ತಾಯಿಯಿಂದ ಮಹಿಳಾ ಆಯೋಗದ ಅಧ್ಯಕ್ಷರಿಗೆ, ಎಡಿಜಿಪಿಗೆ ಪತ್ರ ಬರೆಯಲಾಗಿದೆ. ಆದರೂ ಪ್ರಕರಣದಲ್ಲಿ ಈವರೆಗೂ ಯಾವುದೇ ಪ್ರಗತಿಯಾಗಿಲ್ಲ. ಸಿಐಡಿ ಈವರೆಗೂ ಯಾವುದೇ ಪಂಚನಾಮೆ ಮಾಡಿಲ್ಲ, ಸಾಕ್ಷ್ಯ ಸಂಗ್ರಹಿಸಿಲ್ಲ. ದಾಖಲೆ ಸೀಜ್ ಮಾಡಿಲ್ಲ, ಪೊಕ್ಸೋ ಕಾಯ್ದೆಯಡಿ ನೋಟಿಸ್ ನೀಡಿಲ್ಲ. ಬಿಎಸ್ ವೈ ಬಂಧಿಸಿ ವಿಚಾರಣೆ ನಡೆಸಿ ಸತ್ಯಾಂಶ ಬಯಲಿಗೆ ತರಬೇಕು. ಸಿಸಿಟಿವಿ , ಮೆಮೊರಿ ಕಾರ್ಡ್, ಹಾರ್ಡ್ ಡಿಸ್ಕ್ ಗಳನ್ನ ಸೀಜ್ ಮಾಡಬೇಕು. ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಯಾಗುತ್ತಿಲ್ಲ ಎಂದು ಎಂದು ಸಂತ್ರಸ್ತೆಯ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು.

Previous article27 ವರ್ಷಗಳ ನಂತರ ಬಾರ್ಡರ್ ಅಂಚಿನಲ್ಲಿ ಸನ್ನಿ
Next article‘ಹಮಾರೆ ಬಾರಾ’ ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ