ಕುಣಿಗಲ್ : ತಾಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.
ತಮ್ಮ ಬೆಂಬಲಿಗರ ಜೊತೆ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಜಯೇಂದ್ರಗೆ ಒಳ್ಳೆಯದಾಗಲಿ ಎಂದು ಪೂಜೆ ಸಲ್ಲಿಸಿದರು. ಜಿಲ್ಲೆಯ ಬಿಜೆಪಿ ಮುಖಂಡರು, ಬೆಂಬಲಿಗರು ಇದ್ದರು.