ಯತ್ನಾಳ್‌ರಿಂದ ಚಾಮುಂಡಿ ಸನ್ನಿಧಿಯಲ್ಲಿ ಪೂಜೆ: ಚಿಂಚೋಳಿ ತಾಲ್ಲೂಕಿನ ಜನತೆಗೆ ಸಿಹಿ ಸುದ್ದಿ

ರೈತರ ಏಳಿಗೆಗೆ ನಾಂದಿ: ನೂರಾರು ಜನರಿಗೆ ಉದ್ಯೋಗ

ಮೈಸೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಇಂದು ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ​ಪೂಜೆ ಸಲ್ಲಿಸಿದರು.
ಶಕ್ತಿ ದೇವತೆ ಎದುರು ಫೈಲ್ ಇಟ್ಟು ಯತ್ನಾಳ್ ಪೂಜೆ ಸಲ್ಲಿಸಿದ್ದಾರೆ. ಅಷ್ಟಕ್ಕೂ ಆ ಫೈಲ್‌ನಲ್ಲಿ ಏನಿರಬಹುದು ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು ಈ ಕುರಿತಂತೆ ಬಸನಗೌಡ ಪಾಟೀಲ್​ ಯತ್ನಾಳ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಸುಪ್ರೀಂ ಕೋರ್ಟ್ ಆದೇಶಾನುಸಾರ ನಮ್ಮ ಸಿದ್ದಸಿರಿ ಪವರ್ ಹಾಗು ಎಥನಾಲ್ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ. ಈ ಸಂಬಂಧ ನಾನು ನಾಡದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪೂಜೆ ಸಲ್ಲಿಸಿದ್ದೇನೆ. ಚಿಂಚೋಳಿ ತಾಲ್ಲೂಕಿನಲ್ಲಿರುವ ನಮ್ಮ ಕಾರ್ಖಾನೆ ಆರಂಭವಾಗುವುದರಿಂದ ನೂರಾರು ಉದ್ಯೋಗ ಸೃಷ್ಟಿಯಾಗುತ್ತದೆ ಹಾಗು ರೈತರ ಏಳಿಗೆಗೆ ನಾಂದಿಯಾಗುತ್ತದೆ ಎಂದಿದ್ದಾರೆ.