ಯತ್ನಾಳ್​ ಅಭಿಮಾನಿ ಸಾವು

0
10

ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಹಿನ್ನೆಲೆಯಲ್ಲಿ ನಿನ್ನೆ ಯತ್ನಾಳ್‌ ಅಭಿಮಾನಿ ಸಂತೋಷ್ ತಟಗಾರ ಬಿಜೆಪಿ ಪಕ್ಷದ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದ ಅವರು ಇಂದು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬಕ್ಕೆ ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ಲೈಟ್ ಕಂಬಕ್ಕೆ ಕಾರು ಡಿಕ್ಕಿಯಾದ ರಭಸಕ್ಕೆ ಸಂತೋಷ್ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು. ಆದರೆ ಜನರ‌ ಮನಸ್ಸಿನಿಂದ ಉಚ್ಛಾಟನೆ ಮಾಡುವುದಕ್ಕೆ ಆಗಲ್ಲ. ವೇಟ್ ಆ್ಯಂಡ್ ಸಿ. ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜಲಿ ಬಿಜೆಪಿ RIP ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.

Previous articleವಿಧಾನಸಭೆಯಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ
Next articleಯತ್ನಾಳ ಏಕಾಂಗಿಯಲ್ಲ: ನಾಳೆ ಬೆಂಗಳೂರಲ್ಲಿ ಭಿನ್ನಮತೀಯರ ಸಭೆ