ಒಂದು ಸಮುದಾಯಕ್ಕೆ ಅವಮಾನ ಮಾಡಿದವರು ಕಾಂಗ್ರೆಸ್‌ಗೆ ಬರುವುದು ಕಷ್ಟ
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಹಾಕಿದರೇ ನೋಡೋಣ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯತ್ನಾಳ್ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎನ್ನುವ ಕುರಿತು ಪ್ರತಿಕ್ರಿಯಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಿಲ್ಲ. ಅರ್ಜಿ ಹಾಕಿದರೇ ನೋಡೋಣ, ಯತ್ನಾಳ್ ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಅವರು ಕಾಂಗ್ರೆಸ್‌ಗೆ ಬರುವುದು ಕಷ್ಟ, ಯಾರನ್ನು ಸೇರ್ಪಡೆ ಮಾಡಬೇಕು ಎಂಬುದು ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಅವರೇನು ನಮ್ಮನ್ನು ಹುಡುಕಿ ಬಂದಿಲ್ಲ. ಒಂದು ವೇಳೆ ಬಂದರೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಆದರೆ ಇವೆಲ್ಲವೂ ಅಷ್ಟೊಂದು ಸರಳವಾಗಿಲ್ಲ. ಅವರು ಬಹಳಷ್ಟು ಬಾರಿ ನಮ್ಮನ್ನು ಬೈದಿದ್ದಾರೆ. ಒಂದು ಜನಾಂಗವನ್ನು ಬೈದಿದ್ದಾರೆ. ಹಾಗಾಗಿ ಅಷ್ಟೊಂದು ಸರಳವಾಗಿ ಆಗುವುದಿಲ್ಲ ಎಂದರು. ಇನ್ನು ಕೆಪಿಸಿಇ ಅಧ್ಯಕ್ಷರ ಬದಲಾವಣೆ ಕುರಿತಂತೆ ನಾವು ಮಾತನಾಡುವುದರಲ್ಲಿ ಯಾವ ಅರ್ಥವಿಲ್ಲ ಎಲ್ಲರೂ ವರಿಷ್ಠರನ್ನ ಭೇಟಿ ಮಾಡುತ್ತಾರೆ. ಅಭಿಪ್ರಾಯ ಸಲಹೆ ಪಡೆಯೋದು ಇರುತ್ತದೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ, ಡಿಸಿಎಂ ನಿರ್ಧಾರ ಮಾಡುತ್ತಾರೆ ಎಂದರು.