ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಕೇಸುಗಳನ್ನು ಮಾನ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಬಾಗಲಕೋಟೆ ಹಾಗೂ ಗದಗ ಪೊಲೀಸರು ಲೋಕ ಸಭಾ ಚುನಾವಣೆಯಲ್ಲಿ ನನ್ನ ಮೇಲೆ ದಾಖಲಿಸಿದ್ದ ಕ್ರಿಮಿನಲ್ ಕೇಸುಗಳನ್ನು ಮಾನ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿದ್ದು ನನ್ನನ್ನು ತೇಜೋವಧೆ ಮಾಡುವ ನಿಟ್ಟಿನಲ್ಲಿ ದಾಖಲಾಗಿದ್ದವು ಎಂದಿದ್ದಾರೆ.