ಯತ್ನಾಳ ಆರೋಪದ ಬಗ್ಗೆ ತನಿಖೆ ಶೀಘ್ರ

0
8
ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಉಗ್ರರ ನಂಟು ಹೊಂದಿರುವ ಮೌಲ್ವಿ ಒಬ್ಬರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಕ್ಕೆ ಸಂಬಂಧಿಸಿದಂತೆ ಶೀಘ್ರವಾಗಿ ಸೂಕ್ತ ತನಿಖೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಲ್ವಿ ತನ್ವೀರ್ ಹಾಶ್ಮಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇರುವ ಭಾವಚಿತ್ರವನ್ನು ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಆದರೆ, ಆ ಭೇಟಿ ಸಂದರ್ಭದಲ್ಲಿ ಹಾಶ್ಮಿ ಅವರಿಗೆ ಇರುವ ನಂಟಿನ ಕುರಿತು ಗುಪ್ತ ಮಾಹಿತಿ ಇತ್ತೋ? ಇಲ್ಲವೋ ಎಂಬುದು ತಿಳಿದಿಲ್ಲ. ಈ ಎಲ್ಲ ವಿಷಯ ಕುರಿತು ಸೂಕ್ತ ತನಿಖೆಯಾಗಿ ಮಾಹಿತಿ ಹೊರ ಬರಬೇಕಿದೆ ಎಂದರು.

Previous articleಸ್ವಂತ ಲಾಭಕ್ಕಾಗಿ ಸದನದ ದುರ್ಬಳಕೆ
Next articleಪಿಎಂ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದಿಂದ `ಅಸಹಕಾರ’